Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಮಾಡಿ ನೋಡಿ ಕೊತ್ತಂಬರಿ ವಡೆ!
*ಶ್ರೀರಕ್ಷಾ, ಬೆಂಗಳೂರು
ಬೇಕಾಗುವ ಪದಾರ್ಥಗಳು
ಉದ್ದಿನ ಬೇಳೆ: 2 ಕಪ್ಪು
ಹಸಿ ಮೆಣಸಿನಕಾಯಿ: 5
ಶುಂಠಿ: ಒಂದಿಂಚು
ಕೊತ್ತಂಬರಿ ಸೊಪ್ಪು: 1 ಕಟ್ಟು
ಸಣ್ಣಗೆ ಹೆಚ್ಚಿಕೊಂಡ ಈರುಳ್ಳಿ: 2
ಕರಿ ಬೇವು:ಸ್ವಲ್ಪ
ಉಪ್ಪು: ರುಚಿಗೆ ತಕ್ಕಷ್ಟು
ಎಣ್ಣೆ: ಕರಿಯಲು
ಮಾಡುವ ವಿಧಾನ: ಉದ್ದಿನ ಬೇಳೆಯನ್ನು 3 ಗಂಟೆಗಳ ಕಾಲ ನೀರಿನಲ್ಲಿ ನೆನೆಸಬೇಕು. ನಂತರ ನೀರನ್ನು ಬಸಿದು, ಹಸಿ ಮೆಣಸಿನಕಾಯಿ, ಶುಂಠಿಯ ಜೊತೆಗೆ ಒಂಚೂರು ನೀರು ಹಾಕಿ ಮಿಕ್ಸಿಯಲ್ಲಿ ಚೆನ್ನಾಗಿ ರುಬ್ಬಿಕೊಳ್ಳಬೇಕು.
ನಂತರ ಸಣ್ಣಗೆ ಹೆಚ್ಚಿಕೊಂಡ ಈರುಳ್ಳಿ, ಕೊತ್ತ್ತಂಬರಿ ಸೊಪ್ಪು, ಕರಿಬೇವು ಮತ್ತು ಉಪ್ಪನ್ನು ರುಬ್ಬಿಕೊಂಡ ಹಿಟ್ಟಿನೊಂದಿಗೆ ಚೆನ್ನಾಗಿ ಕಲಸಬೇಕು. ಬಾಣಲೆಗೆ ಎಣ್ಣೆಯನ್ನು ಹಾಕಿ ಬಿಸಿ ಮಾಡಿ. ಎರಡೂ ಕೈಗಳ ಅಂಗೈಯನ್ನು ನೀರಿನಿಂದ ಸ್ವಲ್ಪ ಒದ್ದೆ ಮಾಡಿಕೊಳ್ಳಿ(ಏಕೆಂದರೆ ಹಿಟ್ಟು ಕೈಗೆ ಅಂಟಿಕೊಳ್ಳುವುದಿಲ್ಲ), ಒಂಚೂರು ಹಿಟ್ಟನ್ನು ತೆಗೆದುಕೊಂಡು ಒತ್ತಿ ವೃತ್ತಾಕಾರ ಮಾಡಿಕೊಳ್ಳಿ, ಮಧ್ಯ ಭಾಗದಲ್ಲಿ ಒಂದು ಸಣ್ಣ ರಂಧ್ರ ಮಾಡಿ.
ಈಗ ನಿಧಾನಕ್ಕೆ ಎಣ್ಣೆಗೆ ಬಿಟ್ಟು ವಡೆ ಎರಡು ಕಡೆ ಹೊಂಬಣ್ಣಕ್ಕೆ ಬರುವವರೆಗೂ ಕರಿಯಿರಿ. ಅಷ್ಟೆ ಕೊತ್ತಂಬರಿ ವಡೆ ಸಿದ್ಧವಾದಂತೆ. ನಿಮಗಿಷ್ಟವಾದ ಚಟ್ನಿಯೊಂದಿಗೆ ಸವಿಯಬಹುದು.



Click it and Unblock the Notifications
