Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ತಿಂಡಿ : ಡೋಕಳಾ
ಡೋಕಳಾ ತಯಾರಿಸುವುದು ಬಹಳ ಸುಲಭ. ತಯಾರಿಸಲು ಬೇಕಾಗುವ ಸಾಮಗ್ರಿಗಳು ಕಡಿಮೆ. ಗುಜರಾತಿನ ಈ ಪಾಕ ನಮ್ಮ ನಾಡಿಗೆ ಬಂದು ಬಹಳಷ್ಟು ವರ್ಷಗಳೇ ಆಗಿಹೋದವು. ಡೋಕಳಾ ಎಂದರೆ ಇದು ನಮ್ಮದೇ ಖಾದ್ಯವೇನೋ ಅನ್ನುವಷ್ಟರ ಮಟ್ಟಿಗೆ ಪರಿಚಿತವಾಗಿದೆ.
ಬೇಕಾಗುವ ಸಾಮಗ್ರಿ :
ಕಡಲೆ ಬೇಳೆ : 250 ಗ್ರಾಂ
ಎಣ್ಣೆ : 100 ಗ್ರಾಂ
ಜೀರಿಗೆ : 10 ಗ್ರಾಂ
ಸಾಸಿವೆ : 10 ಗ್ರಾಂ
ಕೊತ್ತಂಬರಿ : 2 ಕಂತೆ
ಉಪ್ಪು : ರುಚಿಗೆ ತಕ್ಕಷ್ಟು
ತಯಾರಿಸುವ ವಿಧಾನ :
ಹೆಚ್ಚೂಕಡಿಮೆ 12 ಗಂಟೆಗಳ ಕಾಲ ನೆನೆಹಾಕಿದ ಕಡಲೆ ಬೇಳೆಯನ್ನು ರವೆರವೆ ಇರುವಂತೆ ರುಬ್ಬಿಕೊಳ್ಳಿ. ಈಗ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿಕೊಳ್ಳಿ. ಮರುದಿನ ಬೆಳಗ್ಗೆ ಬಾಣಲೆಯಲ್ಲಿ ಒಗ್ಗರಣೆ ಮಾಡಿಕೊಂಡು ಕೊತ್ತಂಬರಿ ಸೊಪ್ಪನ್ನು ಸಣ್ಣಗೆ ಹೆಚ್ಚಿ ಒಗ್ಗರಣೆ ಜೊತೆಗೆ ಮಿಶ್ರಣ ಮಾಡಿ. ನಂತರ ಒಂದು ಪಾತ್ರೆಗೆ ಎಣ್ಣೆ ಸವರಿ ಅದರಲ್ಲಿ ಹಿಟ್ಟನ್ನು ಅಗಲವಾಗಿ ಹರಡಿ ಇಡ್ಲಿ ಬೇಯಿಸುವ ಹಾಗೆ ಬೇಯಿಸಿ. ಬೆಂದ ನಂತರ ಕೆಳಗಿಳಿಸಿ, ಮೊದಲೇ ಮಾಡಿಟ್ಟುಕೊಂಡ ಒಗ್ಗರಣೆಯನ್ನು ಮೇಲ್ಗಡೆ ಹರಡಿ. ತಣ್ಣಗಾದ ನಂತರ ಚಿಕ್ಕದಾಗಿ ಕತ್ತರಿಸಿ. ಇದನ್ನು ಕಾಯಿಚಟ್ನಿಯೊಂದಿಗೆ ತಿಂದರೆ ರುಚಿಯಾಗಿರುತ್ತದೆ.
(ದಟ್ಸ್ಕನ್ನಡ ಪಾಕಶಾಲೆ)



Click it and Unblock the Notifications
