Latest Updates
-
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್
ರುಚಿಕರವಾದ ಆಲೂ ಬೋಂಡಾದ ರೆಸಿಪಿ
ಆಲೂಬೋಂಡಾ ತಯಾರಿಸುವ ವಿಧಾನ ಸಾಮಾನ್ಯವಾಗಿ ಹೆಚ್ಚಿನವರಿಗೆ ಗೊತ್ತಿರುತ್ತದೆ. ಇದನ್ನು ಸುಲಭವಾಗಿ ತಯಾರಿಸಬಹುದಾಗಿದ್ದು ಈ ಬೋಂಡಾಕ್ಕೆ ಹಾಕುವ ಖಾರ, ಉಪ್ಪಿನ ಪ್ರಮಾಣ ಗೊತ್ತಿದ್ದರೆ ಸಾಕು ಅಡುಗೆ ಸರಿಯಾಗಿ ಬಾರದವರು ಕೂಡ ಇದನ್ನು ತಯಾರಿಸಹುದು.
ಸುಲಭವಾಗಿ ತಯಾರಿಸಬಹುದಾದ ಆಲೂಬೋಂಡಾದ ರೆಸಿಪಿ ನೋಡಿ ಇಲ್ಲಿದೆ:

ಬೇಕಾಗುವ ಸಾಮಾಗ್ರಿಗಳು:
* ಬೇಯಿಸಿದ ಆಲೂಗೆಡ್ಡೆ 4
* ಹಸಿ ಮೆಣಸಿನ ಕಾಯಿ 2
* 3/4 ಕಪ್ ಕಡಲೆ ಹಿಟ್ಟು ಮತ್ತು 1/4 ಕಪ್ ಸ್ವಲ್ಪ ಮೈದಾ
* ಗರಂ ಮಸಾಲ 1 ಚಮಚ
* ಅರಿಶಿಣ ಪುಡಿ 1/4 ಚಮಚ
* ಸ್ವಲ್ಪ ಕೊತ್ತಂಬರಿ ಸೊಪ್ಪು
* ರುಚಿಗೆ ತಕ್ಕ ಉಪ್ಪು
* ಎಣ್ಣೆ
ತಯಾರಿಸುವ ವಿಧಾನ:
1. ಬೇಯಿಸಿದ ಆಲೂಗೆಡ್ಡೆಯ ಸಿಪ್ಪೆ ಸುಲಿದು ಚೆನ್ನಾಗಿ ಹಿಸುಕಬೇಕು, ಅದಕ್ಕೆ ರುಚಿಗೆ ತಕ್ಕ ಉಪ್ಪು, ಗರಂ ಮಸಾಲ, ಕತ್ತರಿಸಿದ ಹಸಿ ಮೆಣಸಿನ ಕಾಯಿ, ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಬೇಕು.
2. ನಂತರ ಆಲೂ ಮಿಶ್ರಣದಿಂದ ಚಿಕ್ಕ-ಚಿಕ್ಕ ಉಂಡೆಗಳನ್ನು ಕಟ್ಟಿ.
3. ಈಗ ಮತ್ತೊಂದು ಪಾತ್ರೆಯಲ್ಲಿ ಮೈದಾ ಮತ್ತು ಕಡಲೆಹಿಟ್ಟು ಹಾಕಿ ಅದಕ್ಕೆ ರುಚಿಗೆ ತಕ್ಕ ಉಪ್ಪು ಹಾಕಿ ಮತ್ತು ನೀರು ಹಾಕಿ ಕಲೆಸಬೇಕು. ಮಿಶ್ರಣ ತುಂಬಾ ಗಟ್ಟಿಯಾಗಿರಬಾರದು, ನೀರು-ನೀರಾಗಿಯೂ ಇರಬಾರದು.
4. ಈಗ ಬಾಣಲೆಯಲ್ಲಿ ಅರ್ಧದಷ್ಟು ಎಣ್ಣೆ ಹಾಕಿ ಕಾಯಿಸಬೇಕು, ಆಲೂಗೆಡ್ಡೆ ಮಿಶ್ರಣದಿಂದ ಕಟ್ಟಿದ ಉಂಡೆಗಳನ್ನುಮೈದಾದಲ್ಲಿ ಅದ್ದಿ ಕುದಿಯುತ್ತಿರುವ ಎಣ್ಣೆಗೆ ಹಾಕಿ ಕಂದು ಬಣ್ಣ ಬರುವಾಗ ತೆಗೆದರೆ ರುಚಿಕರವಾದ ಅಲೂಬೋಂಡಾ ರೆಡಿ.
ಇದನ್ನು ಟೊಮೆಟೊ ಸಾಸ್ ನಲ್ಲಿ ಅದ್ದಿ ಟೀ ಜೊತೆ ಸವೆಯಲು ತುಂಬಾ ರುಚಿಕರವಾಗಿರುತ್ತದೆ.



Click it and Unblock the Notifications
