Latest Updates
-
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಆಲೂ ಕಬಾಬ್-ಪ್ಯೂರ್ ವೆಜ್

ಬೇಕಾಗುವ ಸಾಮಾಗ್ರಿಗಳು:
* ಆಲೂಗೆಡ್ಡೆ 4
* ಈರುಳ್ಳಿ 1
* ಹಸಿ ಮೆಣಸಿನ ಕಾಯಿ 3
* ಸ್ವಲ್ಪ ಕೊತ್ತಂಬರಿ ಸೊಪ್ಪು
* ಗರಂ ಮಸಾಲೆ ಪುಡಿ ಅರ್ಧ ಚಮಚ
* ಅರಿಶಿಣ ಪುಡಿ 1/4 ಚಮಚ
* 4 ಬ್ರೆಡ್ ಚೂರು ಅಥವಾ ಪೀಸ್
* ಸ್ವಲ್ಪ ಪುದೀನಾ ಎಲೆ
* ಕೆಂಪು ಮೆಣಸಿನ ಪುಡಿ 1/2 ಚಮಚ
* ಅಕ್ಕಿ ಹಿಟ್ಟು 1/4 ಕಪ್
* ಜೋಳದ ಹಿಟ್ಟು 1/4 ಕಪ್
* ಎಣ್ಣೆ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಆಲೂಗೆಡ್ಡೆಯನ್ನು ಬೇಯಿಸಿ ಸಿಪ್ಪೆ ಸುಲಿದು, ಚೆನ್ನಾಗಿ ಹಿಸುಕಬೇಕು.
2. ಬ್ರೆಡ್ ಚೂರುಗಳನ್ನು ನೀರಿನಲ್ಲಿ ಅದ್ದಿ , ನಂತರ ಅದರಿಂದ ನೀರನ್ನು ಹಿಂಡಿ, ಬ್ರೆಡ್ ಚೂರುಗಳನ್ನು ಹಿಸುಕಿದ ಆಲೂಗೆಡ್ಡೆ ಜೊತೆ ಹಾಕಿ ಮಿಶ್ರ ಮಾಡಬೇಕು.
3. ಈಗ ಕತ್ತರಿಸಿದ ಈರುಳ್ಳಿ, ಹಸಿಮೆಣಸಿನ ಕಾಯಿ, ಕೊತ್ತಂಬರಿ ಸೊಪ್ಪು, ಪುದೀನಾ ಸೊಪ್ಪು, ಸ್ವಲ್ಪ ಉಪ್ಪು ಹಾಕಿ ಮಿಶ್ರ ಮಾಡಬೇಕು.ನಂತರ ಈ ಮಿಶ್ರಣದಿಂದ ಚಿಕ್ಕ ಉಂಡೆ ಕಟ್ಟಬೇಕು.
4. ಈಗ ಜೋಳದ ಹಿಟ್ಟು ಮತ್ತು ಅಕ್ಕಿ ಹಿಟ್ಟನ್ನು ಒಂದು ಪಾತ್ರೆಯಲ್ಲಿ ಹಾಕಿ ಸ್ವಲ್ಪ ನೀರು ಹಾಕಿ ಸ್ವಲ್ಪ ಗಟ್ಟಿಯಾದ ಪೇಸ್ಟ್ ರೀತಿಯಲ್ಲಿ ಕಲೆಸಬೇಕು. ನಂತರ ರುಚಿಗೆ ತಕ್ಕ ಉಪ್ಪು, ಗರಂ ಮಸಾಲೆ ಪುಡಿ, ಕೆಂಪು ಮೆಣಸಿನ ಪುಡಿ, ಅರಿಶಿಣಪುಡಿ ಹಾಕಿ ಮಿಶ್ರ ಮಾಡಬೇಕು.
5. ಈಗ ಬಾಣಲೆಯಲ್ಲಿ ಅರ್ಧದಷ್ಟು ಎಣ್ಣೆ ಹಾಕಿ ಎಣ್ಣೆಯನ್ನು ಕುದಿಸಬೇಕು. ಎಣ್ಣೆ ಕುದಿಯುತ್ತಿರುವಾಗ ಉಂಡೆ ಕಟ್ಟಿದ ಆಲೂಗೆಡ್ಡೆ ಮಿಶ್ರಣವನ್ನು ಬೇಕಾದ ಆಕಾರದಲ್ಲಿ ತಟ್ಟಿ ಅದನ್ನು ಕಲೆಸಿದ ಹಿಟ್ಟಿನಲ್ಲಿ ಅದ್ದಿ ಎಣ್ಣೆಗೆ ಹಾಕಬೇಕು. ಈ ತಿಂಡಿ ಕಂದು ಬಣ್ಣ ಬರುವಾಗ ತೆಗೆದರೆ ರುಚಿಕರವಾದ ಆಲೂ ಕಬಾಬ್ ರೆಡಿ.
ಇದನ್ನುಇದನ್ನು ಬಿಸಿಬಿಸಿಯಾಗಿ ಟೊಮೆಟೊ ಸಾಸ್ ಅಥವಾ ಚಟ್ನಿ ಜೊತೆ ತಿನ್ನಲು ರುಚಿಕರವಾಗಿರುತ್ತದೆ.



Click it and Unblock the Notifications
