Latest Updates
-
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ!
ತೆಂಗಿನಕಾಯಿ ಕಚೋರಿ ರೆಸಿಪಿ
ಸಂಜೆ ತಿಂಡಿಗೆ ಕಚೋರಿ ಮಾಡಿದರೆ ಸವಿಯಲು ತುಂಬಾ ರುಚಿಯಾಗಿರುತ್ತದೆ. ಇದನ್ನು ಅನೇಕ ರುಚಿಯಲ್ಲಿ ತಯಾರಿಸಬಹುದು. ಈ ಕಚೋರಿ ತಿಂದರೆ ಹೊಟ್ಟೆಯೂ ಬೇಗನೆ ತುಂಬುತ್ತದೆ. ಸ್ವಲ್ಪ ಸಮಯವಿದ್ದಾಗ ಈ ಕಚೋರಿಯನ್ನು ಸುಲಭವಾಗಿ ತಯಾರಿಸಬಹುದಾಗಿದ್ದು, ತೆಂಗಿನಕಾಯಿಯಿಂದ ತಯಾರಿಸುವ ಕಚೋರಿ ರೆಸಿಪಿ ನೋಡಿ ಇಲ್ಲಿದೆ.

ಬೇಕಾಗುವ ಸಾಮಾಗ್ರಿಗಳು:
ಏಲಕ್ಕಿ 2
ಚಕ್ಕೆ 2
ತೆಂಗಿನಕಾಯಿ ತುರಿ ಒಂದೂವರೆ ಕಪ್
ಮೈದಾ 5 ಕಪ್
ತುಪ್ಪ 5-6 ಚಮಚ
ಸಕ್ಕರೆ 2 ಚಮಚ
ರುಚಿಗೆ ತಕ್ಕ ಉಪ್ಪು
ಎಣ್ಣೆ
ತಯಾರಿಸುವ ವಿಧಾನ:
1. ಏಲಕ್ಕಿ ಮತ್ತು ಚಕ್ಕೆಯನ್ನು ಚೆನ್ನಾಗಿ ಪುಡಿ ಮಾಡಬೇಕು.
2. ನಂತರ ಸ್ವಲ್ಪ ದೊಡ್ಡ ಪಾತ್ರೆಗೆ ಮೈದಾ ಹಾಕಿ ಅದ್ಕಕೆ ತುಪ್ಪ, ಸಕ್ಕರೆ, ರುಚಿಗೆ ತಕ್ಕ ಉಪ್ಪು ಮತ್ತು ಸ್ವಲ್ಪ ನೀರು ಹಾಕಿ ಚೆನ್ನಾಗಿ ಮಿಶ್ರ ಮಾಡಬೇಕು. ಹಿಟ್ಟು ಮೃದುವಾಗುವವರೆಗೆ ಕಲೆಸಿ ಬದಿಯಲ್ಲಿ ಇಡಬೇಕು.
3. ನಂತರ ಚಕ್ಕೆ ಮತ್ತು ಏಲಕ್ಕಿ ಪುಡಿಯನ್ನು ಹಿಟ್ಟಿಗೆ ಹಾಕಿ ಮಿಶ್ರ ಮಾಡಬೇಕು.
4. ನಂತರ ಹಿಟ್ಟಿನಿಂದ ಚಿಕ್ಕ ಉಂಡೆಗಳನ್ನು ಮಾಡಿ ಬೆರಳಿನಿಂದ ಮಧ್ಯದಲ್ಲಿ ಗುಂಡಿ ಮಾಡಿ ಅದರಲ್ಲಿ ತುರಿದ ತೆಂಗಿನ ಕಾಯಿ ತುಂಬಬೇಕು.
5. ನಂತರ ಬಾಣಲೆಗೆ ಎಣ್ಣೆ ಹಾಕಿ ಕಾಯಿಸಬೇಕು. ಎಣ್ಣೆ ಕುದಿಯುವಾಗ ಈ ಉಂಡೆಗಳನ್ನು ಸ್ವಲ್ಪ ತಟ್ಟಿ ಎಣ್ಣೆಯಲ್ಲಿ ಹಾಕಿ ಕಂದು ಬಣ್ಣ ಬರುವಾಗ ತೆಗೆದರೆ ತೆಂಗಿನಕಾಯಿ ಕಚೋರಿ ರೆಡಿ.
ಇದನ್ನು ಬಿಸಿ ಬಿಸಿಯಾಗಿ ಸವಿಯಲು ಚೆಂದ.



Click it and Unblock the Notifications
