Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಕ್ಯಾರೆಟ್ ಮಂಚೂರಿಯನ್ ರುಚಿ ನೋಡಿದ್ದೀರಾ?
ಗೋಬಿ ಮಂಚೂರಿಯನ್, ಬೇಬಿ ಕಾರ್ನ್ ಮಂಚೂರಿಯನ್, ಮಶ್ರೂಮ್ ಮಂಚೂರಿಯನ್ ಇದೇ ಗುಂಪಿಗೆ ಸೇರುವ ಕ್ಯಾರೆಟ್ ಮಂಚೂರಿಯನ್ ನ ರುಚಿ ನೋಡಿದ್ದೀರಾ? ನಮ್ಮಲ್ಲಿ ಹೆಚ್ಚಿನವರು ಇದರ ರುಚಿ ನೋಡಿರುವುದಿಲ್ಲ, ಏಕೆಂದರೆ ಈ ಮಂಚೂರಿಯನ್ ಲಿಸ್ಟ್ ಹೋಟೆಲ್ ಗಳ ಮೆನುನಲ್ಲೂ ಕಾಣ ಸಿಗುವುದಿಲ್ಲ.
ಈ ಮಂಚೂರಿಯನ್ ರುಚಿ ನೋಡಿಲ್ಲವೆಂದರೆ ಇಂದೇ ಟ್ರೈ ಮಾಡಿ, ಇದನ್ನು ಸುಲಭವಾಗಿ ಮಾಡಬಹುದಾಗಿದ್ದು ರೆಸಿಪಿಗೆ ಮುಂದೆ ನೋಡಿ:
ಬೇಕಾಗುವ ಸಾಮಾಗ್ರಿಗಳು
ಕ್ಯಾರೆಟ್ 1/4 ಕೆಜಿ
ಬೆಳ್ಳುಳ್ಳಿ 4 ಎಸಳು
1 ಇಂಚಿನಷ್ಟು ದೊಡ್ಡದಿರುವ ಶುಂಠಿ (ಚಿಕ್ಕದಾಗಿ ಕತ್ತರಿಸಿ)
ಈರುಳ್ಳಿ1(ಕತ್ತರಿಸಿದ್ದು)
ಕ್ಯಾಪ್ಸಿಕಂ ಅರ್ಧದಷ್ಟು
ಟೊಮೆಟೊ ಪೇಸ್ಟ್ 5 ಚಮಚ
ಚಿಲ್ಲಿ ಸಾಸ್ ಅರ್ಧ ಚಮಚ
ಸೋಯಾ ಸಾಸ್ ಅರ್ಧ ಚಮಚ
ಜೋಳದ ಹಿಟ್ಟು 1 ಚಮಚ
ಕೊತ್ತಂಬರಿ ಸೊಪ್ಪು
ರುಚಿಗೆ ತಕ್ಕ ಉಪ್ಪು
ಎಣ್ಣೆ
ಹಿಟ್ಟಿಗೆ ಸಾಮಾಗ್ರಿಗಳು
ಮೈದಾ 1/4 ಕಪ್
ಜೋಳದ ಹಿಟ್ಟು 3 ಚಮಚ
ಖಾರದ ಪುಡಿ ಅರ್ಧ ಚಮಚ
ಕರಿ ಮೆಣಸಿನ ಪುಡಿ ಅರ್ಧ ಚಮಚ
ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಅರ್ಧ ಚಮಚ
ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
* ಹಿಟ್ಟಿಗೆ ಹೇಳಿರುವ ಸಾಮಾಗ್ರಿಗಳನ್ನು ಹಾಕಿ, ಅದಕ್ಕೆ ಸ್ವಲ್ಪ ನೀರು ಹಾಕಿ ಹಿಟ್ಟು ಸ್ವಲ್ಪ ಗಟ್ಟಿಯಾಗಿರುವಂತೆ ಕಲೆಸಿ.
* ಈಗ ಬಾಣಲೆಗೆ ಅರ್ಧದಷ್ಟು ಎಣ್ಣೆ ಹಾಕಿ ಕಾಯಿಸಿ.
* ಈಗ ಕ್ಯಾರೆಟ್ ತುಂಡುಗಳನ್ನು ಹಿಟ್ಟಿಗೆ ಅದ್ದಿ, ಅದನ್ನು ಎಣ್ಣೆಯಲ್ಲಿ ಹಾಕಿ ಗೋಲ್ಡನ್ ಬ್ರೌನ್ ಬಣ್ಣ ಬರುವವರೆಗೆ ಫ್ರೈ ಮಾಡಿ, ಒಂದು ಪಾತ್ರೆಯಲ್ಲಿ ಹಾಕಿ ಬದಿಯಲ್ಲಿಡಿ.
* ಈಗ ಸಾಸ್ ಗೆ 1 ಚಮಚ ಎಣ್ಣೆಯನ್ನು ಬಾಣಲೆಗೆ ಹಾಕಿ ಬಿಸಿ ಮಾಡಿ, ಅದಕ್ಕೆ ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಹಸಿ ಮೆಣಸಿನಕಾಯಿ, ಕ್ಯಾಪ್ಸಿಕಂ, ಈರುಳ್ಳಿ ಹಾಕಿ, ಈರುಳ್ಳಿ ಕಂದು ಬಣ್ಣ ಬರುವವರೆಗೆ ಫ್ರೈ ಮಾಡಿ. ಈಗ ಟೊಮೆಟೊ ಸಾಸ್, ಚಿಲ್ಲಿ ಮತ್ತು ಸೋಯಾ ಸಾಸ್ ಹಾಕಿ, 1 ಗ್ಲಾಸ್ ನೀರು ತೆಗೆದುಕೊಂಡು ಅದರಲ್ಲಿ ಜೋಳದ ಹಿಟ್ಟು ಮಿಶ್ರಣ ಮಾಡಿ, ಅದನ್ನು ಪಾತ್ರೆಗೆ ಹಾಕಿ, ಸ್ವಲ್ಪ ಉಪ್ಪು ಸೇರಿಸಿ, ಫ್ರೈ ಮಾಡಿದ ಕ್ಯಾರೆಟ್ ಹಾಕಿ ಮಿಕ್ಸ್ ಮಾಡಿ, ಕೊತತ್ಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಕ್ಯಾರೆಟ್ ಮಂಚೂರಿಯನ್ ರೆಡಿ.



Click it and Unblock the Notifications

