Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಸಂಜೆಯ ಬಾಯಿರುಚಿಗೆ ಎಗ್ ಬೋಂಡ
ಮನೆಯ ಫ್ರಿಜ್ ನಲ್ಲಿ ಯಾವಾಗಲೂ ಮೊಟ್ಟೆ ಇದ್ದೇ ಇರುತ್ತದೆ ಅಲ್ಲವೆ. ಹಾಗಿದ್ದ ಮೇಲೆ ತಿಂಡಿಯನ್ನು ಮಾಡಲು ಸುಲಭ. ಇದು ಆರೋಗ್ಯಕ್ಕೆ ಕೂಡ ಒಳ್ಳೆಯದು. ಆಫೀಸು ಅಥವ ಕಾಲೇಜು ಮುಗಿಸಿ ಮನೆಗೆ ಬಂದ ತಕ್ಷಣ ಏನಾದರೂ ಮಾಡಿ ತಿನ್ನಬೇಕೆನಿಸಿದಾಗ ಈ ಸುಲಭ ತಿಂಡಿಯನ್ನು ಪ್ರಯತ್ನಿಸಬಹುದು.
ಮೊಟ್ಟೆಯನ್ನು ಬಳಸಿ ಮಾಡುವ ತಿಂಡಿಗಳು ಮಾಡಲು ಸುಲಭ ಮತ್ತು ಆರೋಗ್ಯಕ್ಕೆ ಒಳ್ಳೆಯದು ಕೂಡ. ಎಗ್ ಬೋಂಡ ಅಥವ ಎಗ್ ಪಕೋಡ ಎಂದು ಕೂಡ ಇದನ್ನು ಕರೆಯುತ್ತಾರೆ. ಇದನ್ನು ತಯಾರಿಸಲು ಹೆಚ್ಚಿನ ಸಾಮಗ್ರಿಗಳ ಅಗತ್ಯವಿಲ್ಲ.

ಬೇಕಾಗುವ ಸಾಮಗ್ರಿಗಳು
1. ಮೊಟ್ಟೆಗಳು- 5
2. ಕಡಲೆಹಿಟ್ಟು- 1/2 ಕಪ್
3. ಅಚ್ಚಖಾರದ ಪುಡಿ- 1 ಟೀಚಮಚ
4. ಉಪ್ಪು- ರುಚಿಗೆ ತಕ್ಕಷ್ಟು
5. ಎಣ್ಣೆ
ಮಾಡುವ ವಿಧಾನ
1. ಮೊಟ್ಟೆಯನ್ನು ಬೇಯಿಸಿ ಅದರ ಸಿಪ್ಪೆಯನ್ನು ಬಿಡಿಸಿಕೊಳ್ಳಿ. ಅದನ್ನು ಸಣ್ಣದಾಗಿ ಕತ್ತರಿಸಿಕೊಳ್ಳಬಹುದು ಇಲ್ಲವೇ ಇಡಿಯಾಗಿ ಕೂಡ ಬಳಸಬಹುದು.
2. ಒಂದು ಪಾತ್ರೆಯಲ್ಲಿ ಕಡಲೆಹಿಟ್ಟನ್ನು ಖಾರದಪುಡಿ ಮತ್ತು ಉಪ್ಪು ಹಾಕಿ ಕಲಸಿಟ್ಟುಕೊಳ್ಳಿ.
3. ಬಾಣಲಿಯಲ್ಲಿ ಎಣ್ಣೆಯನ್ನು ಹಾಕಿ ಕಾದ ನಂತರ ಮೊಟ್ಟಯನ್ನು ಹಿಟ್ಟಲ್ಲಿ ಅದ್ದಿ ಎಣ್ಣೆಗೆ ಬಿಡಿ.
4. ಅದು ಹೊಂಬಣ್ಣಕ್ಕೆ ತಿರುಗುವವರೆಗೆ ಕರಿಯಿರಿ.
ಎಗ್ ಬೋಂಡ ತಿನ್ನಲು ಸಿದ್ಧ. ಇದನ್ನು ಟೊಮೊಟೊ ಕೆಚಪ್ ಅಥವ ಕೊತ್ತಂಬರಿ ಚಟ್ನಿಯೊಂದಿಗೆ ತಿನ್ನಲು ರುಚಿಯಾಗಿರುತ್ತದೆ.



Click it and Unblock the Notifications
