Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಬಾಯಿಯಲ್ಲಿ ನೀರೂರಿಸುವ ಮಂಗಳೂರು ಬಜ್ಜಿ ರೆಸಿಪಿ
ಗೋಳಿಬಜೆ ಎಂದಾಕ್ಷಣ ದಕ್ಷಿಣ ಕನ್ನಡ ನೆನಪಾಗುವುದು ಸಹಜ ಏಕೆಂದರೆ ಗೋಳಿಬಜೆ ಅಷ್ಟೋಂದು ಇಲ್ಲಿ ಪ್ರಸಿದ್ಧಿಯನ್ನು ಪಡೆದಿದೆ. ಇದನ್ನು ಮಂಗಳೂರು ಬಜ್ಜಿ ಎಂದೂ ಕರೆಯುತ್ತಾರೆ. ಅಲ್ಲದೆ ಇದನ್ನು ಬಹಳ ಸುಲಭವಾಗಿ ಮಾಡಬಹುದಾದ ತಿಂಡಿಯೂ ಹೌದು.
ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿ ಮಲಗಿ ಎದ್ದಾಗ ಏನೋ ತಿನ್ನಬೇಕೆನಿಸುತ್ತದೆ. ಆಗ ತಕ್ಷಣವೇ 20 ನಿಮಿಷದಲ್ಲಿ ಮಾಡಬಹುದಾದ ತಿಂಡಿಯೆಂದರೆ ಗೋಳಿಬಜೆ!. ಹಾಗಾದರೆ ಇನ್ನೇಕೆ ತಡ? ಬನ್ನಿ ಸಂಜೆಯ ಸ್ನ್ಯಾಕ್ಸ್‌ಗೆ ಗೋಳಿ ಬಜೆ ಮಾಡುವ ವಿಧಾನವನ್ನು ಬೋಲ್ಡ್ ಸ್ಕೈ ನಿಮಗಾಗಿ ನೀಡುತ್ತಿದೆ
ಬೇಕಾಗುವ ಸಾಮಗ್ರಿಗಳು:
* ಮೈದಾ ಹಿಟ್ಟು - ಒಂದು ಬಟ್ಟಲು
* ಮೊಸರು - ಒಂದು ಬಟ್ಟಲು/ ಕಲೆಸಲು ಬೇಕಾಗುವಷ್ಟು
* ಸಕ್ಕರೆ ಪುಡಿ - ಅರ್ಧ ಚಮಚಸೋಡ- ಚಿಟಿಕೆ
* ಉಪ್ಪು- ರುಚಿಗೆ ಬೇಕಾಗುವಷ್ಟು
* ಎಣ್ಣೆ - ಕರಿಯಲು
ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ: ದುಡಿಯುವ ಅಮ್ಮಂದಿರಿಗಾಗಿ 8 ಸ್ನಾಕ್ಸ್ ರೆಸಿಪಿ
ತಯಾರಿಸುವ ವಿಧಾನ:
* ಬಾಣಲೆಗೆ ಎಣ್ಣೆ ಹಾಕಿ ಕಾಯಲು ಇಡಿ.
* ಮೈದಾಗೆ ಸೋಡಾ ಪುಡಿ, ಉಪ್ಪು, ಸಕ್ಕರೆಪುಡಿ ಹಾಕಿ ಚೆನ್ನಾಗಿ ಬೆರೆಸಿ, ಅದಕ್ಕೆ ಮೊಸರು ಹಾಕಿ ಗಟ್ಟಿಯಾಗಿ ಕಲೆಸಿ. ತುಂಬಾ ತೆಳ್ಳಗೆ ಇರಬಾರದು, ಇಡ್ಲಿ ಹಿಟ್ಟಿಗಿಂತ ಗಟ್ಟಿ ಇರಬೇಕು. ಕೈಯಲ್ಲಿ ತೆಗೆದುಕೊಂಡು ಬಿಡುವಂತಿರಬೇಕು.
* ಎಣ್ಣೆ ಕಾದ ನಂತರ ಕಲೆಸಿದ ಮಿಶ್ರಣವನ್ನು ಕೈನಲ್ಲಿ ತೆಗೆದುಕೊಂಡು ಒಂದೊಂದಾಗಿ ಚಿಕ್ಕದಾಗಿ ಉಂಡೆ ಉಂಡೆಯಂತೆ ಎಣ್ಣೆಯಲ್ಲಿ ಬಿಡಿ. ಬೋಂಡಾ ತರಹ ಹಾಕಿ, ಕೆಂಪು ಬಣ್ಣ ಬರುವವರೆಗೆ ಕರಿದು, ತೆಗೆಯಿರಿ, ರುಚಿ ರುಚಿಯಾದ ಗೋಳಿ ಬಜೆ ರೆಡಿ! ಇನ್ನು ತೆಂಗಿನ ಕಾಯಿ ಚಟ್ನಿ ಜೊತೆ ಸರ್ವ್ ಮಾಡಿ.



Click it and Unblock the Notifications
