Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಸುಲಭವಾಗಿ ಮಾಡಬಹುದಾದ ಪಾನಿಪುರಿ ರೆಸಿಪಿ
ಪಾನಿಪುರಿ ಯಾರಿಗೆ ತಾನೇ ಇಷ್ಟವಿಲ್ಲ? ರಸ್ತೆ ಪಕ್ಕದ ಚಾಟ್ ಅಂಗಡಿಗಳಲ್ಲಿ ಪಾನಿಪುರಿ ತಿನ್ನುವ ಗಮ್ಮತ್ತೇ ಬೇರೆ. ಹುಳಿ ಹುಳಿ, ಖಾರ ಖಾರವಾಗಿರುವ 'ಪಾನಿ' ಅಥವಾ 'ಜೀರಿಗೆ ನೀರು' ತಯಾರಿಕೆಯೇ ಇದರಲ್ಲಿ ಮುಖ್ಯವಾದುದು. ಮನೆಯಲ್ಲೇ ಪಾನಿಪುರಿ ತಯಾರಿಸಲು ಸುಲಭದ ವಿಧಾನ ಇಲ್ಲಿದೆ..
ಬಾಯಿಯಲ್ಲಿ ನೀರೂರಿಸುವ ಮಂಗಳೂರು ಬಜ್ಜಿ ರೆಸಿಪಿ

ಬೇಕಾಗುವ ಸಾಮಗ್ರಿ:
ಪಾನಿ ತಯಾರಿಸಲು -
*ಕೊತ್ತಂಬರಿ ಸೊಪ್ಪು - 1 ಕಟ್ಟು
*ಪುದೀನಾ ಸೊಪ್ಪು - 1 ಕಟ್ಟು
*ಹಸಿಮೆಣಸು - 2 ರಿಂದ 3
*ಹುಣಸೆಹಣ್ಣು - ದೊಡ್ಡ ನಿಂಬೆಗಾತ್ರದಷ್ಟು
*ನಿಂಬೆಹಣ್ಣು - 1
*ಕಾಳುಮೆಣಸು - 2 ಟೀ ಚಮಚ
*ಜೀರಿಗೆ - 2 ಟೀ ಚಮಚ
*ಉಪ್ಪು - ರುಚಿಗೆ ತಕ್ಕಷ್ಟು
* ಕುದಿಸಿ ಆರಿಸಿದ ನೀರು - ಸುಮಾರು ಒಂದೂವರೆ ಲೀಟರ್
ಸಂಜೆಯ ಸ್ನ್ಯಾಕ್ಸ್ ರೆಸಿಪಿ: ಚಿಕನ್ ಈರುಳ್ಳಿ ಪಕೋಡಾ!
ಆಲೂ ಪಲ್ಯ ತಯಾರಿಸಲು -
* 1 ದೊಡ್ಡ ಆಲೂಗಡ್ಡೆ
* ಕೆಂಪು ಮೆಣಸಿನ ಪುಡಿ - 1 / 2 ಚಮಚ
* ಕಾಳುಮೆಣಸಿನ ಪುಡಿ - 1 / 4 ಚಮಚ
* ಉಪ್ಪು - ರುಚಿಗೆ ತಕ್ಕಷ್ಟು
* ಆಮ್ ಚೂರ್ ಪೌಡರ್ - 1 / 4 ಚಮಚ ಅಥವಾ ನಾಲ್ಕಾರು ಹನಿ ನಿಂಬೆರಸ
* ಮಧ್ಯಮಗಾತ್ರದ ಈರುಳ್ಳಿ - 1
* ಹೆಚ್ಚಿದ ಕೊತ್ತಂಬರಿ ಸೊಪ್ಪು - 2 ಚಮಚ
ಮಾಡುವ ವಿಧಾನ:
*ಕರಿಮೆಣಸು, ಜೀರಿಗೆಯನ್ನು ಹುರಿದು ಪುಡಿಮಾಡಿಕೊಳ್ಳಿ. ಹರಳು ಉಪ್ಪನ್ನು ಸೇರಿಸುವುದಾದರೆ ಅದನ್ನೂ ಸ್ವಲ್ಪ ಹುರಿದುಕೊಳ್ಳಿ.
*ಕೊತ್ತಂಬರಿ ಸೊಪ್ಪು, ಪುದೀನಾ ಸೊಪ್ಪು, ಹುಣಸೆಹಣ್ಣು, ಹಸಿಮೆಣಸು ಇಷ್ಟನ್ನೂ ಸ್ವಲ್ಪ ನೀರು ಸೇರಿಸಿ ರುಬ್ಬಿ, ಚೆನ್ನಾಗಿ ಸೋಸಿಕೊಳ್ಳಿ.
*ಸೋಸಿಕೊಂಡ ರಸಕ್ಕೆ ಬೇಕಾದಷ್ಟು ನೀರನ್ನು ಸೇರಿಸಿ, ಪುಡಿಮಾಡಿದ ಜೀರಿಗೆ, ಕರಿಮೆಣಸನ್ನು ಸೇರಿಸಿ. ರುಚಿಗೆ ತಕ್ಕಂತೆ ಉಪ್ಪು ಮತ್ತು ನಿಂಬೆರಸವನ್ನು ಸೇರಿಸಿ ಕಲಕಿ. ಇದರ ರುಚಿ ಉಪ್ಪು, ಹುಳಿ, ಖಾರ ಹದವಾಗಿರಬೇಕು.
ಆಲೂ ಪಲ್ಯ:
1.ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಳ್ಳಿ.
2.ಆಲೂಗಡ್ಡೆಯನ್ನು ಬೇಯಿಸಿ, ಕೈಗಳಿಂದ ಹಿಸುಕಿ ಮೆತ್ತಗೆ ಹಿಟ್ಟಿನಂತೆ ಮಾಡಿಕೊಳ್ಳಿ.
3. ಇದಕ್ಕೆ ಹೆಚ್ಚಿದ ಈರುಳ್ಳಿ, ಕೊತ್ತಂಬರಿ ಸೊಪ್ಪು, ಕೆಂಪು ಮೆಣಸಿನ ಪುಡಿ, ಪುಡಿಮಾಡಿದ ಕಾಳುಮೆಣಸು, ಉಪ್ಪು, ಹುಳಿ ಎಲ್ಲವನ್ನೂ ಸೇರಿಸಿ ಚೆನ್ನಾಗಿ ಕಲಸಿ.
4. ಈಗ ಗೋಲ್ ಗಪ್ಪಾ ಅಥವಾ ಪೂರಿಯನ್ನು ತೆಗೆದುಕೊಂಡು ಕೈಯಿಂದ ಒತ್ತಿ ಒಂದು ಮೇಲ್ಮೈಯಲ್ಲಿ ತೂತು ಮಾಡಿಕೊಳ್ಳಿ. ಪೂರಿಯ ಅರ್ಧಭಾಗದವರೆಗೆ ಪಲ್ಯವನ್ನು ತುಂಬಿ, ನಂತರ ಉಳಿದರ್ಧಕ್ಕೆ ಪಾನಿ ಅಥವಾ ಜೀರಿಗೆ ನೀರನ್ನು ತುಂಬಿಸಿ ಇಡೀ ಪೂರಿಯನ್ನು ಹಾಗೇ ಬಾಯಲ್ಲಿಟ್ಟು ಸವಿಯಿರಿ.



Click it and Unblock the Notifications
