Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಗರಿಗರಿಯಾದ ಸೋಯಾಬೀನ್ ಪಕೋಡ
ಪಕೋಡವನ್ನು ಅನೇಕ ಬಗೆಯಲ್ಲಿ ತಯಾರಿಸಬಹುದು. ಇವತ್ತು ನಾವು ಸೋಯಾಬೀನ್ ನಿಂದ ಪಕೋಡ ತಯಾರಿಸುವ ವಿಧಾನ ತಿಳಿಯೋಣ. ಸೋಯಾಬೀನ್ ನಲ್ಲಿ ಅಧಿಕ ಪ್ರೊಟೀನ್ ಇರುವುದರಿಂದ ಈ ಪಕೋಡ ಆರೋಗ್ಯಕ್ಕೆ ಒಳ್ಳೆಯದು ಹಾಗೂ ಸವಿಯಲೂ ರುಚಿಕರವಾಗಿರುತ್ತದೆ.
ಸೋಯಾಬೀನ್ ಪಕೋಡದ ರೆಸಿಪಿ ನೋಡಿ ಇಲ್ಲಿದೆ.

ಬೇಕಾಗುವ ಸಾಮಾಗ್ರಿಗಳು:
ಸೋಯಾಬಿನ್ 1 ಕಪ್ 100 ಗ್ರಾಂ
ಈರುಳ್ಳಿ 2 (ಕತ್ತರಿಸಿದ್ದು)
ಆಲೂಗೆಡ್ಡೆ 3 (ಬೇಯಿಸಿದ್ದು)
ಕಡಲೆಹಿಟ್ಟು 2 ಕಪ್
ಕೆಂಪು ಮೆಣಸಿನ ಪುಡಿ 1 ಚಮಚ
ಚಿಟಿಕೆಯಷ್ಟು ಅಜ್ವೈನ್
ಕೊತ್ತಂಬರಿ ಬೀಜ 1 ಚಮಚ
ಚಿಟಿಕೆಯಷ್ಟು ಅಡುಗೆ ಸೋಡಾ
ರುಚಿಗೆ ತಕ್ಕ ಉಪ್ಪು
ನೀರು
ಎಣ್ಣೆ
ತಯಾರಿಸುವ ವಿಧಾನ:
1. ಸೋಯಾಬೀನ್ಸ್ ಅನ್ನು ಅರ್ಧ ಗಂಟೆ ನೀರಿನಲ್ಲಿ ನೆನೆ ಹಾಕಿದರೆ ಅದು ಮೆತ್ತಗಾಗುತ್ತದೆ.
2. ನಂತರ ಅದನ್ನು ತೊಳೆದು ಒಂದು ಪಾತ್ರೆಯಲ್ಲಿ ಹಾಕಿ ಅದಕ್ಕೆ ಅಜ್ವೈನ್, ಕೆಂಪು ಮೆಣಸಿನ ಪುಡಿ, ರುಚಿಗೆ ತಕ್ಕ ಉಪ್ಪು, ಅಡುಗೆ ಸೋಡಾ, ಕೊತ್ತಂಬರಿ ಬೀಜ ಹಾಕಿ ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಅದಕ್ಕೆ ಕತ್ತರಿಸಿದ ಈರುಳ್ಳಿ, ಚೆನ್ನಾಗಿ ಹಿಸುಕಿದ ಆಲೂಗೆಡ್ಡೆ ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ ಮಿಶ್ರಣ ಮಾಡಿ ಅದರಿಂದ ಉಂಡೆಕಟ್ಟಬೇಕು.
3. ಮತ್ತೊಂದು ಪಾತ್ರೆಯಲ್ಲಿ ಕಡಲೆ ಹಿಟ್ಟಿಗೆ ಚಿಟಿಕೆಯಷ್ಟು ಉಪ್ಪು ಮತ್ತು ನೀರು ಹಾಕಿ ಕಲೆಸಬೇಕು (ಮಿಶ್ರಣ ಗಟ್ಟಿಯಾಗಿರಬೇಕು).
4. ಈಗ ಬಾಣಲೆಗೆ ಅರ್ಧದಷ್ಟು ಎಣ್ಣೆ ಹಾಕಿ ಕಾಯಿಸಬೇಕು, ಕಾದ ಎಣ್ಣೆ ಸೋಯಾ ಮಿಶ್ರಣದ ಉಂಡೆಯನ್ನು ಕಡಲೆಹಿಟ್ಟಿನಲ್ಲಿ ಅದ್ದಿ ಎಣ್ಣೆಯಲ್ಲಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿದರೆ ರುಚಿಕರವಾದ ಸೋಯಾಬೀನ್ ಪಕೋಡ ರೆಡಿ.



Click it and Unblock the Notifications
