Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಕ್ರಿಸ್ ಮಸ್ ಸ್ಪೆಷಲ್ : ಬ್ರೆಡ್ ಹಲ್ವ
ಕ್ರಿಸ್ ಮಸ್ ಅಂದರೆ ಸಂಭ್ರಮ ಹಾಗೂ ಸಿಹಿ ತಿನಿಸುಗಳ ಪರ್ವ. ಬಗೆಬಗೆಯ ಕೇಕ್ ಮಾಡಿ ತಿನ್ನುವುದು ಸಾಮಾನ್ಯ. ಆದರೆ ಕೇಕ್ ಮಾಡಲು ಬೇಕಾದ ಸಾಮಾಗ್ರಿಗಳ ವೆಚ್ಚ ಭರಿಸಲಾಗದ ಶ್ರೀಸಾಮಾನ್ಯರು ದೈನಂದಿನ ಆಹಾರವಾದ ಬ್ರೆಡ್ ಬಳಸಿ, ಅಚ್ಚುಕಟ್ಟಾದ ಸಿಹಿ ತಿಂಡಿ ಮಾಡಿ ಸಂತಸ ಪಡಬಹುದು. ಸುಲಭವಾಗಿ ತಯಾರಿಸಬಹುದಾದ ಹಲ್ವಾ ಖಂಡಿತಾ ಬಾಯಿ ಚಪ್ಪರಿಸುವಂತೆ ಮಾಡುತ್ತದೆ.
ಬೇಕಾಗುವ ಪದಾರ್ಥ :
1 ಪೌಂಡ್ ದೊಡ್ಡ ಬ್ರೆಡ್
2 ಕಪ್ ಸಕ್ಕರೆ
1 ಕಪ್ ಹಾಲು
1 ಕಪ್ ತುಪ್ಪ ಮತ್ತು
ಆಗತ್ಯಕ್ಕೆ ತಕ್ಕಂತೆ ದ್ರಾಕ್ಷಿ , ಏಲಕ್ಕಿ ಪುಡಿ, ಗೋಡಂಬಿ ಚೂರು, ರೋಸ್ ಎಸೆನ್ಸ್ .
ಮಾಡುವ ವಿಧಾನ :
ಬ್ರೆಡ್ಡನ್ನು ಸಣ್ಣ ಚೂರುಗಳಾಗಿ ಮಾಡಿ ತುಪ್ಪ ಹಾಕಿ ಬಾಣಲೆಯಲ್ಲಿ ಕೆಂಪಗೆ ಹುರಿಯಿರಿ. ಪ್ರತ್ಯೇಕ ಪಾತ್ರೆಯೊಂದರಲ್ಲಿ ಸ್ವಲ್ಪ ಸಕ್ಕರೆ ಮತ್ತು ಹಾಲು ಬೆರೆಸಿ ಪಾಕ ಮಾಡಿಕೊಳ್ಳಿ. ಹುರಿದಿಟ್ಟ ಬ್ರೆಡ್ಡನ್ನು ಹಾಲಿನ ಪಾಕದಲ್ಲಿ ಹಾಕಿ ಸಣ್ಣ ಉರಿಯಲ್ಲಿ ಚೆನ್ನಾಗಿ ಮಗುಚಿರಿ. ಈ ಮಿಶ್ರಣ ಗಟ್ಟಿಯಾಗುತ್ತಿರುವಂತೆಯೇ ತುಪ್ಪ, ಗೇರು ಬೀಜ, ಏಲಕ್ಕಿ ಪುಡಿ, ರೋಸ್ ಎಸೆನ್ಸ್ ಹಾಕಿರಿ.
ಮಗುಚುವುದನ್ನು ನಿಲ್ಲಿಸಿದರೆ ಮಿಶ್ರಣ ಅಡಿ ಹಿಡಿಯಬಹುದು. ಪಾಕ ಗಟ್ಟಿಯಾಗುತ್ತ ಒಂದು ಹದಕ್ಕೆ ಬಂದಾಗ, ತುಪ್ಪ ಸವರಿದ ತಟ್ಟೆಯಲ್ಲಿ ಹರಡುವುದು. ಆರಿದ ನಂತರ ತುಂಡು ಮಾಡಿ ಉಪಯೋಗಿಸಬಹುದು. ಇಲ್ಲದಿದ್ದರೆ ಕ್ಯಾರೆಟ್ ಹಲ್ವದಂತೆ ಚಮಚದಲ್ಲೂ ತಿನ್ನಬಹುದು.
(ದಟ್ಸ್ ಕನ್ನಡ ಪಾಕಶಾಲೆ)



Click it and Unblock the Notifications
