Latest Updates
-
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI!
ಕಾಲು ಉಂಗುರದ ಬಗ್ಗೆ ವೈಜ್ಞಾನಿಕ ದೃಷ್ಟಿಕೋನವೇನು?
ಭಾರತದಲ್ಲಿ ಸ್ತ್ರೀಯರು ಕಾಲುಂಗರ ಧರಿಸಿದರೆ ಅವರನ್ನು ವಿವಾಹಿತರು ಎಂದು ಗುರುತಿಸುತ್ತಾರೆ. ಬಹುತೇಕ ಭಾರತೀಯ ನಾರಿಯರು, ವಿವಾಹವಾದ ಬಳಿಕ ಕಾಲುಂಗುರವನ್ನು ಧರಿಸುತ್ತಾರೆ. ಇದು ಕೇವಲ ಸ್ತ್ರೀಯೋರ್ವಳು ವಿವಾಹಿತೆ ಎಂಬುದರ ಸೂಚಕವಷ್ಟೇ ಅಲ್ಲ, ಇದಕ್ಕೆ ವೈಜ್ಞಾನಿಕ ಕಾರಣವೂ ಕೂಡ ಇದೆ.
ಭಾರತೀಯ ವೇದಶಾಸ್ತ್ರಗಳ ಪ್ರಕಾರ (Vedham, ಅಥವಾ vedam), ಎರಡೂ ಪಾದಗಳಲ್ಲಿ ಕಾಲುಂಗುರಗಳನ್ನು ಧರಿಸುವುದರಿಂದ, ಸ್ತ್ರೀಯರ ಋತುಚಕ್ರವು ನಿಯಮಿತಗೊಂಡು, ಸಮರ್ಪಕವಾದ ಅಂತರದಲ್ಲಿ ಉಂಟಾಗುತ್ತದೆ ಎಂಬ ನಂಬಿಕೆಯಿದೆ.

ಇದು ವಿವಾಹಿತ ಸ್ತ್ರೀಯರಿಗೆ, ಗರ್ಭ ಧರಿಸಲು ಉತ್ತಮ ವೇದಿಕೆಯನ್ನುಂಟು ಮಾಡುತ್ತದೆ. ಮಾತ್ರವಲ್ಲದೇ, ನಿರ್ದಿಷ್ಟ ನರವೊಂದು ಕಾಲಿನ ಎರಡನೆಯ ಬೆರಳನ್ನು ಗರ್ಭಾಶಯಕ್ಕೆ ಸಂಪರ್ಕಿಸುವಾಗ, ಅದು ಹೃದಯದ ಮೂಲಕ ಹಾದುಹೋಗುತ್ತದೆ ಎಂದು ಹೇಳಲಾಗುತ್ತದೆ. ಅದ್ದರಿಂದ, ಕಾಲುಂಗುರಗಳನ್ನು ಯಾವಾಗಲೂ ಬಲ ಮತ್ತು ಎಡ ಪಾದಗಳ ಎರಡನೆಯ ಬೆರಳುಗಳಿಗೇ ಧರಿಸಿರುವುದನ್ನು ನೀವು ಗಮನಿಸಿರಬಹುದು. ಇದು ಗರ್ಭಾಶಯವನ್ನು ನಿಯಂತ್ರಿಸುತ್ತದೆ ಮತ್ತು ಗರ್ಭಾಶಯಕ್ಕೆ ಸಮಪ್ರಮಾಣದ, ಸಂತುಲಿತ ರಕ್ತದೊತ್ತಡವನ್ನು ನಿರ್ವಹಿಸುವುದರ ಮೂಲಕ ಅದರ ಆರೋಗ್ಯವನ್ನು ಕಾಪಾಡುತ್ತದೆ.
ಬೆಳ್ಳಿಯು ಒಂದು ಉತ್ತಮ ವಾಹಕವಾಗಿದ್ದು, ಅದರಿಂದ ಮಾಡಲ್ಪಟ್ಟ ಕಾಲುಂಗುರಗಳು, ಭೂಮಿಯ ಧ್ರುವ ಶಕ್ತಿಗಳನ್ನು ಹೀರಿ ಶರೀರಕ್ಕೆ ವರ್ಗಾಯಿಸುತ್ತವೆ ಹಾಗೂ ತನ್ಮೂಲಕ ಸಂಪೂರ್ಣ ದೈಹಿಕ ವ್ಯವಸ್ಥೆಗೆ ಹೊಸ ಚೈತನ್ಯವನ್ನು ಒದಗಿಸುತ್ತವೆ.
ಮಹಾನ್ ಭಾರತೀಯ ಕಾವ್ಯವಾದ ರಾಮಾಯಣದಲ್ಲಿ ಕಾಲುಂಗುರವು ಮಹತ್ವದ ಪಾತ್ರವಹಿಸುತ್ತದೆ. ಸೀತೆಯು ರಾವಣನಿಂದ ಅಪಹರಿಸಲ್ಪಟ್ಟಾಗ, ಆಕೆಯು ಕಾಲುಂಗುರಗಳನ್ನು (kaniazhi) ಮಾರ್ಗದ ಮೇಲೆ, ಭಗವಾನ್ ಶ್ರೀರಾಮನ ಅವಗಾಹನೆಗಾಗಿ, ಅಪಹರಣಕ್ಕೆ ತಾನು ಗುರಿಯಾಗಿ ಈ ಮಾರ್ಗದ ಮೂಲಕ ಒಯ್ಯಲ್ಪಟ್ಟಿರುವೆನೆಂದು ಶ್ರೀರಾಮನು ಗುರುತಿಸಲೆಂದು ಎಸೆಯುತ್ತಾಳೆ. ಕಾಲುಂಗುರಗಳು ಅತಿ ಪ್ರಾಚೀನ ಕಾಲದಿಂದಲೂ ಬಳಕೆಯಲ್ಲಿದ್ದವು ಎಂಬುದನ್ನು ಇದು ಸೂಚಿಸುತ್ತದೆ.



Click it and Unblock the Notifications
