Latest Updates
-
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ!
ಹುಡುಗಿ ಜೊತೆ ಸಿಕ್ಕಿಬಿದ್ದ ಭಾರತದ ಸ್ಟಾರ್ ಕ್ರಿಕೆಟರ್! ಖಾಸಗಿ ಚಾಟ್ ಲೀಕ್.. ಇಲ್ಲಿದೆ ವಿಡಿಯೋ
ಯುವತಿ ಜೊತೆ ಸಿಕ್ಕಿಬಿದ್ದ ಟೀಮ್ ಇಂಡಿಯಾ ಸ್ಟಾರ್ ವೇಗಿ.. ಹುಡುಗಿಯೊಂದಿಗಿನ ಖಾಸಗಿ ಚಾಟ್ ವಿಡಿಯೋ ಭಾರೀ ವೈರಲ್! ಹೌದು, ಟೀಮ್ ಇಂಡಿಯಾದ ವೇಗಿ ಅರ್ಷದೀಪ್ ಸಿಂಗ್ (Arshdeep Singh) ಅವರು ಹೊಸ ವಿವಾದಕ್ಕೆ ಸಿಲುಕಿದ್ದಾರೆ. ಇವರು ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಯುವತಿಯೊಬ್ಬಳೊಂದಿಗೆ ಮಾಡಿರುವ ಚ್ಯಾಟ್‌ನ ಸ್ಟ್ರೀನ್‌ಶಾಟ್ ವಿಡಿಯೋ ವೈರಲ್ ಆಗುತ್ತಿದೆ. ಆದರೆ, ವೈರಲ್ ಆದ ವಿಡಿಯೋದಲ್ಲಿ ಯಾವುದೇ ಅಶ್ಲೀಲ ಸಂದೇಶಗಳಿಲ್ಲ. ನೀವು ಏನು ಮಾಡುತ್ತಿದ್ದೀರಿ? ನಿಮ್ಮ ಮನೆ ಎಲ್ಲಿದೆ? ಎಂದು ಅರ್ಷದೀಪ್ ಕೇಳಿರುವ ಪ್ರಶ್ನೆಗಳಿಗೆ ಯುವತಿ ಉತ್ತರಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವೈರಲ್ ವಿಡಿಯೋ ಬಗ್ಗೆ ಕ್ರಿಕೆಟಿಗ ಅರ್ಷದೀಪ್ ಸಿಂಗ್ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಹೌದು, ಟೀಮ್ ಇಂಡಿಯಾದ ಯುವ ವೇಗಿ ಅರ್ಷದೀಪ್ ಸಿಂಗ್ ಅವರ ಚಾಟ್ ಸ್ಕ್ರೀನ್‌ಶಾಟ್ ವಿಡಿಯೋ ವೈರಲ್ (arshdeep singh private chat leaked) ಆಗಿದೆ. ಈ ವೇಗದ ಬೌಲರ್ ಇನ್‌ಸ್ಟಾಗ್ರಾಮ್‌ನಲ್ಲಿ ಒಬ್ಬ ಯುವತಿಯೊಂದಿಗೆ ಖಾಸಗಿ ಚಾಟ್ ಮಾಡಿದ್ದಾರೆ. ಆ ಸ್ಕ್ರೀನ್‌ಶಾಟ್ ಪ್ರಸ್ತುತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಮೂಲಕ ಟೀಮ್ ಇಂಡಿಯಾ ವೇಗಿ ಹುಡುಗಿ ಜೊತೆ ಸಿಕ್ಕಿಬಿದ್ದಾರೆ. ಇತ್ತ ಪಂಜಾಬ್ ಕಿಂಗ್ಸ್ ಒಡತಿ ಪ್ರೀತಿ ಜಿಂಟಾ (Preity Zinta) ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಬನ್ನಿ, ಈ ಕುರಿತ ಸಂಪೂರ್ಣ ವಿವರಗಳನ್ನು ತಿಳಿಯೋಣ.

'ನಿನ್ನ ಫೋಟೋ ಸೂಪರ್' ಆಗಿದೆ ಎಂದ ಅರ್ಷದೀಪ್!
ಅರ್ಷದೀಪ್ ಸಿಂಗ್ ಸೋಶಿಯಲ್ ಮೀಡಿಯಾದಲ್ಲಿ ಹುಡುಗಿಯ ಜೊತೆ ಚಾಟ್ ಮಾಡುತ್ತಿರುವ ಸ್ಕ್ರೀನ್‌ಶಾಟ್ ವೈರಲ್ ಆಗಿದೆ. ಆದರೆ, ಈ ವಿಡಿಯೋವನ್ನು ಯುವಕರೇ ಸೋರಿಕೆ ಮಾಡಿದ್ದಾರೆ ಎಂದು ಕಾಣುತ್ತದೆ. ಈ ಚಾಟ್‌ನಲ್ಲಿ ಯಾವುದೇ ಅಶ್ಲೀಲ ಸಂದೇಶಗಳಿಲ್ಲ. ನೀವು ಏನು ಮಾಡುತ್ತಿದ್ದೀರಿ? ನಿಮ್ಮ ಮನೆ ಎಲ್ಲಿದೆ? ಎಂದು ಅರ್ಷದೀಪ್ ಸಿಂಗ್ ಆ ಯುವತಿಗೆ ಕೆಲವು ಪ್ರಶ್ನೆಗಳನ್ನು ಮಾತ್ರ ಕೇಳಿದ್ದಾರೆ. ಅದಕ್ಕೆ ಆ ಹುಡುಗಿ ಉತ್ತರಿಸಿದ್ದಾರೆ. ಅರ್ಷದೀಪ್ ಸಿಂಗ್ ಕೂಡ ಕಾಮೆಂಟ್ ಮಾಡಿ, ಆ ಹುಡುಗಿಯ ಫೋಟೋ ಸೂಪರ್ ಆಗಿದೆ ಎಂದು ಹೇಳಿದ್ದಾರೆ. ಈ ಚಾಟ್‌ಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆದರೆ, ಕ್ರಿಕೆಟಿಗರು ಇದಕ್ಕೆ ಇನ್ನೂ ಪ್ರತಿಕ್ರಿಯಿಸಿಲ್ಲ.
ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ
ಅನುಮಾನದ ಸಂಗತಿ ಎಂದರೆ, ಯುವಕರು ಈ ಚಾಟ್‌ನ ಸ್ಕ್ರೀನ್‌ಶಾಟ್‌ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವುದು. ಟೀಮ್ ಇಂಡಿಯಾ ವೇಗಿ ಅರ್ಶ್‌ದೀಪ್ ಸಿಂಗ್ ಅವರು ಚಾಟ್ ಒಂದಕ್ಕೆ ಸಂಬಂಧಿಸಿದಂತೆ ಹೊಸ ವಿವಾದಕ್ಕೆ ಸಿಲುಕಿದ್ದಾರೆ. ಅರ್ಷದೀಪ್ ಸಿಂಗ್ ಆ ಹುಡುಗಿಯೊಂದಿಗೆ ಮಾತನಾಡಲು ಪ್ರಯತ್ನಿಸಿದ್ದಾರೆ. ಆ ಯುವತಿ ಇದೀಗ ಚಾಟ್‌ನ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾಳೆ. ಈ ವೈರಲ್ ವಿಡಿಯೋಗೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಕೆಲವರು ಅರ್ಷದೀಪ್ ಸಿಂಗ್ ಅವರನ್ನು ಟೀಕಿಸಿದ್ದಾರೆ. ಇನ್ನು ಕೆಲವರು ಅವರು ಈ ಅನಗತ್ಯ ವಿಷಯಗಳ ಮೇಲೆ ಏಕೆ ಗಮನಹರಿಸುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದಲ್ಲದೆ, ಆ ಹುಡುಗಿ ಅರ್ಷದೀಪ್ ಸಿಂಗ್ ಜೊತೆಗಿನ ತನ್ನ ಚಾಟ್‌ನ ಸ್ಕ್ರೀನ್‌ಶಾಟ್‌ಗಳು ಮತ್ತು ವಿಡಿಯೋಗಳನ್ನು ಏಕೆ ಹಂಚಿಕೊಳ್ಳಬೇಕು? ಎಂಬ ಪ್ರಶ್ನೆಗಳು ಸಹ ಎದ್ದಿವೆ.
ಅರ್ಷದೀಪ್ ಸಿಂಗ್ ಪ್ರತಿಕ್ರಿಯೆ ಏನು?
ವಿಡಿಯೋ ಸೋರಿಕೆ ಬಗ್ಗೆ ಕ್ರಿಕೆಟಿಗ ಅರ್ಷದೀಪ್ ಸಿಂಗ್ ಇನ್ನೂ ಪ್ರತಿಕ್ರಿಯಿಸಿಲ್ಲ. ಈ ವಿಷಯದ ಬಗ್ಗೆ ಅವರ ಆಪ್ತರು ಮತ್ತು ಕ್ರಿಕೆಟಿಗರು ಯಾವುದೇ ಹೇಳಿಕೆಯನ್ನು ನೀಡಿಲ್ಲ. ಪ್ರಸ್ತುತ, ಅರ್ಷದೀಪ್ ಸಿಂಗ್ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡುತ್ತಿದ್ದಾರೆ. ಈವರೆಗೆ 12 ಪಂದ್ಯಗಳಲ್ಲಿ 11 ಇನ್ನಿಂಗ್ಸ್ ಆಡಿದ್ದಾರೆ. ಇದಲ್ಲದೆ 16 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅರ್ಶ್‌ದೀಪ್ ಸಿಂಗ್ ಆರಂಭಿಕ ಮತ್ತು ಡೆತ್ ಓವರ್‌ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಾರೆ. ಪಂಜಾಬ್ ಈಗಾಗಲೇ ಪ್ಲೇಆಪ್ ಪ್ರವೇಶಿಸಿದೆ. ಯುವತಿಯೊಂದಿಗಿನ ಈ ಚಾಟ್ ಸೋರಿಕೆಯಾದ ಬಳಿಕ, ಅರ್ಶ್‌ದೀಪ್ ಸಿಂಗ್ ಟ್ರೆಂಡಿಂಗ್ ಆಗಿದ್ದಾರೆ. ಈ ವಿಡಿಯೋ ಇನ್‌ಸ್ಟಾಗ್ರಾಮ್ ಹಾಗೂ ಸ್ನ್ಯಾಪ್‌ಚಾಟ್‌ನಲ್ಲಿ ವೈರಲ್ ಆಗುತ್ತಿದೆ.



Click it and Unblock the Notifications
