Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
ಚಂದನ್ ಶೆಟ್ಟಿ-ನಿವೇದಿತಾ ವಿಚ್ಛೇದನ: ಈ ಕಾರಣಕ್ಕೆ ದಾಂಪತ್ಯ ಜೀವನಕ್ಕೆ ಗುಡ್ ಬೈ ಹೇಳಿತಾ ಜೋಡಿ..!
ಕಿರುತೆರೆ ಬೇಬಿ ಡಾಲ್ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ವಿಚ್ಚೇದನಕ್ಕೆ ಮುಂದಾಗಿರುವುದು ಅಭಿಮಾನಿಗಳಲ್ಲಿ ಶಾಕ್ ಮೂಡಿಸಿದೆ. 4 ವರ್ಷದ ಹಿಂದೆ ಮದುವೆಯಾಗಿದ್ದ ಜೋಡಿಯ ಈ ದಿಢೀರ್ ನಿರ್ಧಾರ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
ಆದರೆ ಈ ನಿರ್ಧಾರಕ್ಕೆ ಕಾರಣವೇನು ಎಂಬುದು ಎಲ್ಲರಲ್ಲೂ ಮೂಡಿರುವ ಪ್ರಶ್ನೆಯಾಗಿದೆ. ಹಲವು ರಿಯಾಲಿಟಿ ಶೋ ಸೇರಿ ಹಲವು ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಇತ್ತೀಚಿಗೆ ಸಿನಿಮಾಗಳಲ್ಲು ಒಟ್ಟಿಗೆ ನಟಿಸಿತ್ತು. ಆದರೆ ಈ ದಿಢೀರ್ ನಿರ್ಧಾರ ಎಲ್ಲರಲ್ಲೂ ಶಾಕ್ ತರಿಸಿದೆ.

ಆದರೆ ಈ ವಿಚ್ಛೇದನದ ನಿರ್ಧಾರಕ್ಕೆ ಹಲವು ಕಾರಣಗಳಿವೆ ಎನ್ನಲಾಗಿದೆ. ಅಲ್ಲದೆ ಇಬ್ಬರು ಪರಸ್ಪರ ಒಪ್ಪಿಗೆಯೊಂದಿಗೆ ಈ ವಿಚ್ಛೇದನಕ್ಕೆ ಮುಂದಾಗಿರುವುದಾಗಿ ತಿಳಿದುಬಂದಿದೆ. ಹಾಗಾದ್ರೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ನಡುವೆ ಒಮ್ಮತದ ವಿಚ್ಛೇದನಕ್ಕೆ ಕಾರಣವೇನು ಎಂಬುದನ್ನು ತಿಳಿದುಕೊಳ್ಳೋಣ.
ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಬಿಗ್‌ಬಾಸ್ ಸೀಸನ್ 5ರಲ್ಲಿ ಪರಿಚಯವಾಗಿದ್ದರು. ಇದೇ ಸಮಯದಲ್ಲಿ ಇಬ್ಬರ ನಡುವೆ ಸ್ನೇಹ, ಪ್ರೀತಿಯಾಗಿತ್ತು. ಬಳಿಕ ಒಟ್ಟಿಗೆ ಕಾಣಿಸಿಕೊಂಡಿದ್ದ ಜೋಡಿ ಮೈಸೂರಿನಲ್ಲಿ ಯುವ ದಸರಾ ವೇದಿಕೆ ಮೇಲೆ ಪ್ರತಿ ಹೇಳಿಕೊಂಡು ವಿವಾದ ಮೈ ಮೇಲೆ ಎಳೆದುಕೊಂಡಿದ್ದರು.
ಮೇಳೆ ಬೊಂಬೆ ಬೊಂಬೆ ಎಂಬ ಹಾಡು ಬರೆದು ಎಲ್ಲರನ್ನೂ ರಂಜಿಸಿದ್ದರು. ಇವರಿಬ್ಬರ ಮುದ್ದಾದ ಜೋಡಿಗೆ ಎಲ್ಲರೂ ವಾಹ್ ಎಂದಿದ್ದರು. ಮೈಸೂರಿನ ಯುವ ದಸರಾ ವೇದಿಕೆಯಲ್ಲಿಯೇ ನಿವೇದಿತಾ ಗೌಡರಿಗೆ ಚಂದನ್ ಶೆಟ್ಟಿ ಪ್ರಪೋಸ್ ಮಾಡಿದ್ದರು. ಈ ರೀತಿ ಪ್ರಪೋಸ್ ಮಾಡಿದ್ದು ವಿವಾದಕ್ಕೂ ಕಾರಣವಾಗಿತ್ತು. ಆದರೆ ಇದಾಗಿ ಅದ್ದೂರಿ ಎಂಗೇಜ್‌ಮೆಂಟ್ ನಡೆದಿತ್ತು.
ಆದರೆ ಈಗ ಇಬ್ಬರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ಹಲವರಲ್ಲಿ ಅಚ್ಚರಿ ಮೂಡಿಸಿದೆ. ಆದರೆ ವರದಿಗಳ ಪ್ರಕಾರ ಇಬ್ಬರು ಒಪ್ಪಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರಂತೆ. ಕೆರಿಯರ್ ದೃಷ್ಟಿಯಿಂದ ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನ ಪಡೆದುಕೊಳ್ಲುತ್ತಿದ್ದಾರೆ ಎಂದು ವರದಿಯಾಗಿದೆ. ಜೊತೆಗೆ ನಿವೇದಿತಾ ಗೌಡ ವಿದೇಶದಲ್ಲಿ ವಿದ್ಯಾಭ್ಯಾಸ ನಡೆಸಲು ಮುಂದಾಗಿದ್ದಾರೆ ಹೀಗಾಗಿ ಒಮ್ಮತದ ನಿರ್ಧಾರದಿಂದ ವಿಚ್ಛೇದನ ನೀಡಿ ವಿದೇಶಕ್ಕೆ ತೆರಳಲು ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ ಇಬ್ಬರ ಈ ನಿರ್ಧಾರಕ್ಕೆ ಕಾರಣವನ್ನ ಅವರೇ ಬಹಿರಂಗಪಡಿಸಬೇಕಿದೆ.
ಒಂದೇ ದಿನದಲ್ಲಿ ವಿಚ್ಛೇದನ ಪಡೆದಿದ್ದು ಹೇಗೆ?
ಇತ್ತ ದಂಪತಿ ವಿಚ್ಛೇದನ ಪಡೆಯಬೇಕು ಅಂದರೆ ಇಲ್ಲಿ ಹತ್ತಾರು ನಿಯಮಗಳ ಜೊತೆಗೆ ತಿಂಗಳುಗಳ ಕಾಲ ಕೋರ್ಟ್‌ಗೆ ಅಲೆದಾಡಬೇಕಿದೆ. ಆದರೆ ಇವರ ಪ್ರಕರಣದಲ್ಲಿ ಒಂದೇ ದಿನದಲ್ಲಿ ವಿಚ್ಛೇದನ ಸಿಕ್ಕಿದಂತಾಗಿದೆ. ಹಾಗಾದ್ರೆ ಇದು ಸಾಧ್ಯವಾಗಿದ್ದು ಹೇಗೆ ಎಂಬ ಅನುಮಾನ ಸಹ ಎಲ್ಲರಲ್ಲೂ ಮೂಡಿದೆ.
ಚಂದನ್ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿಯನ್ನು ಸಲ್ಲಿಸಿದ್ದರು. ಇಬ್ಬರಿಗೂ ಆಪ್ತ ಸಮಾಲೋಚನೆ ಮೂಲಕ ಮಾತುಕತೆ ನಡೆಸಲಾಗಿತ್ತು. ವಿಚ್ಛೇದನ ಪ್ರಕ್ರಿಯೆ ಮೊದಲು ಈ ಸಂಧಾನ ನಡೆಯಲೇಬೇಕು. ಅಂತೆಯೇ ಸಂಧಾನಕಾರರು ಮಾತುಕತೆ ನಡೆಸಿದಾಗ ಇಬ್ಬರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿಲ್ಲ. ಹೀಗಾಗಿ ಅಂತಿಮವಾಗಿ ಕೋರ್ಟ್ ವಿಚ್ಛೇದನ ನೀಡಿ ಆದೇಶಿಸಿದೆ ಎಂದು ತಿಳಿದುಬಂದಿದೆ.
ಟಿಕ್‌ಟಾಕ್ ಮಾಡಿ ಸುದ್ದಿಯಾಗುತ್ತಿದ್ದ ನಿವೇದಿತಾ ಗೌಡ ಈಗ ಜಿಎಸ್‌ಟಿ ಎಂಬ ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜಿಎಸ್‌ಟಿ ಸಿನಿಮಾದಲ್ಲಿ ಸೃಜನ್ ಲೋಕೇಶ್ ನಾಯಕನಾಗಿ ನಟಿಸುತ್ತಿದ್ದಾರೆ. ಸೃಜನ್‌ಗೆ ನಾಯಕಿಯಾಗಿ ನಿವೇದಿತಾ ಗೌಡ ನಟಿಸುತ್ತಿದ್ದಾರೆ. ಜೊತೆಗೆ ಸಿನಿಮಾದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್, ಸೃಜನ್ ಪುತ್ರ ಸುಕೃತ್ ಸಹ ನಟಿಸುತ್ತಿದ್ದಾರೆ. ಇನ್ನೂ ಅಚ್ಚರಿ ಎಂದರೆ ಈ ಸಿನಿಮಾಗೆ ಚಂದನ್ ಶೆಟ್ಟಿ ಸಂಗೀತ ನೀಡುತ್ತಿದ್ದಾರೆ. ಇದಲ್ಲದೆ ಕ್ಯಾಂಡಿ ಕ್ರಶ್ ಎಂಬ ಸಿನಿಮಾವೊಂದರಲ್ಲಿ ಚಂದನ್ ಹಾಗೂ ನಿವೇದಿತಾ ಒಟ್ಟಿಗೆ ನಟಿಸುತ್ತಿದ್ದಾರೆ.



Click it and Unblock the Notifications
