Latest Updates
-
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್
ಯುವ ರಾಜ್‌ಕುಮಾರ್ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ ಹಾಕಿದ್ಯಾಕೆ ಯುವ..?
ರಾಜ್‌ಕುಮಾರ್ ಕುಟುಂಬದ ಕುಡಿ ಇತ್ತೀಚಿಗಷ್ಟೇ ಸಿನಿಮಾ ರಂಗದಲ್ಲೂ ಪ್ರವೇಶ ಪಡೆದಿದ್ದ ಯುವ ರಾಜ್‌ಕುಮಾರ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂದು ವರದಿಯಾಗಿದೆ. ನಟ ರಾಘವೇಂದ್ರ ರಾಜಕುಮಾರ್ ಪುತ್ರ ನಟ ಯುವ ರಾಜಕುಮಾರ್ ಅವರು 2019ರಲ್ಲಿ ಶ್ರೀದೇವಿ ಅವರೊಂದಿಗೆ ಮದುವೆ ಆಗಿದ್ದರು. ವೈಯಕ್ತಿಕ ಕಾರಣಗಳಿಂದ ಅವರ ಐದು ವರ್ಷಗಳ ದಾಂಪತ್ಯ ಜೀವನ ಮುರಿದು ಬಿದ್ದಿದೆ ಎನ್ನಲಾಗುತ್ತಿದೆ.
ಅವರು ವಿಚ್ಛದನ ಪಡೆಯಲು ಯುವ ಮತ್ತು ಅವರ ಪತ್ನಿ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಯುವ ರಾಜ್ ಕುಮಾರ್ ಪತ್ನಿ ಶ್ರೀದೇವಿಯವರು ವಿದೇಶದಲ್ಲಿದ್ದಾರೆ. ಆರು ತಿಂಗಳ ಹಿಂದೆ ಶ್ರೀದೇವಿಯಿಂದ ವಿಚ್ಛೇದನಕ್ಕೆ ಕೋರಿ ಯುವ ರಾಜಕುಮಾರ್ ಅವರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.

ಇತ್ತೀಚಿನ ವರ್ಷಗಳಲ್ಲಿ ಇವರಿಬ್ಬರ ನಡುವಿನ ಸಂಬಂಧ ಉತ್ತಮವಾಗಿರಲಿಲ್ಲ ಎಂದು ತಿಳಿದುಬಂದಿದೆ. ಪತ್ನಿ ವಿದೇಶದಲ್ಲೇ ಇರುತ್ತಿದ್ದರು, ಹೀಗಾಗಿ ಇಬ್ಬರಲ್ಲೂ ಹೊಂದಾಣಿಕೆ ಇರಲಿಲ್ಲ ಎಂದು ವರದಿಯಾಗಿದೆ. ಇದೇ ಕಾರಣಕ್ಕೆ ಇಬ್ಬರೂ ದೂರವಾಗಲು ಬಯಸಿದ್ದಾರೆ ಎಂದು ವರದಿಗಳು ತಿಳಿಸಿವೆ. ದಂಪತಿ ನಡುವೆ ಇತ್ತೀಚಿನ ದಿನಗಳಲ್ಲಿ ಸಂಬಂಧ ಹದಗೆಟ್ಟಿತ್ತು. ಹೀಗಾಗಿ ಯುವ ರಾಜ್‌ಕುಮಾರ್ ವಿವಾಹ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿವಾಹ ವಿಚ್ಚೇದನದ ಕುರಿತು ಶ್ರೀದೇವಿ ಭೈರಪ್ಪ ನಿರ್ಧಾರ ತಿಳಿದಿಲ್ಲ. ಯುವ ಸಿನಿಮಾದ ಮುಹೂರ್ತ ಸಮಯದಲ್ಲಿ ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ಭೈರಪ್ಪ ಜತೆಯಾಗಿ ಕಾಣಿಸಿಕೊಂಡಿದ್ದರು. ಆದರೆ ಇದಾದ ಬಳಿಕ ಎಲ್ಲಿಯೂ ಅವರು ಕಾಣಿಸಿಕೊಂಡಿರಲಿಲ್ಲ.
ರಾಜ್‌ಕುಮಾರ್ ಕುಟುಂಬದಲ್ಲೇ ಮೊದಲ ವಿಚ್ಛೇದನ
ನಟ ರಾಜ್‌ಕುಮಾರ್ ಕುಟುಂಬವನ್ನ ದೊಡ್ಮನೆ ಎಂದು ಕರೆಯಲಾಗುತ್ತದೆ. ಇದೊಂದು ತುಂಬಿದ ಕುಟುಂಬವಾಗಿತ್ತು, ಆದರೆ ಯುವ ಹಾಗೂ ಶ್ರೀದೇವಿ ನಡುವಿನ ವಿಚ್ಛೇದನ ಕುಟುಂಬದಲ್ಲೇ ನಡೆಯುತ್ತಿರುವ ಮೊದಲ ವಿಚ್ಛೇದನ ಪ್ರಕರಣವಾಗಿದೆ. ಸದ್ಯ ಯುವ ಜೋಡಿ ಬೇರೆಯಾಗುತ್ತಿರುವ ಸುದ್ದಿ ಗಾಂಧಿ ನಗರದಲ್ಲಿ ಭಾರೀ ಸದ್ದು ಮಾಡುತ್ತಿದೆ. ಜೊತೆಗೆ ಅವರ ಅಭಿಮಾನಿಗಳಿಗೆ ಭರಸಿಡಿಲು ಬಡಿದಂತಾಗಿದೆ.
ನಟ ಯುವರಾಜ್ ಕುಮಾರ್ ಹಾಗೂ ಪತ್ನಿ ಶ್ರೀದೇವಿ ಭೈರಪ್ಪ ಅವರು ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ಮೇ 25 2019ರಲ್ಲಿ ಇವರಿಬ್ಬರು ಅದ್ಧೂರಿಯಾಗಿ ವಿವಾಹವಾಗಿದ್ದರು. ಅವರ ವಿವಾಹ ಮಹೋತ್ಸವಕ್ಕೆ ಇಡೀ ಚಿತ್ರರಂಗ ಸಾಕ್ಷಿಯಾಗಿತ್ತು. ಆದರೆ ಈಗ ಬೇರೆ ಬೇರೆ ಆರ್ಧಾರಕ್ಕೆ ಬಂದಿದ್ದಾರೆ.
ಯಾರು ಈ ಶ್ರೀದೇವಿ ಭೈರಪ್ಪ?
ಶ್ರೀದೇವಿ ಭೈರಪ್ಪ ಮೂಲತಃ ಮೈಸೂರಿನವರು. ಮೈಸೂರಿನಲ್ಲೇ ಹುಟ್ಟಿ ಬೆಳೆದವರು. ಡಾ ರಾಜ್‌ಕುಮಾರ್ ಸಿವಿಲ್ ಸರ್ವೀಸ್ ಅಕಾಡೆಮಿ ಉಸ್ತುವಾರಿ ವಹಿಸಿಕೊಂಡಿದ್ದ ಅವರು ಯುವ ರಾಜ್‌ಕುಮಾರ್ ಅವರನ್ನು ಪ್ರೀತಿ ಸಿ ಮದುವೆಯಾಗಿದ್ದರು. ಇದಕ್ಕೂ ಮೊದಲು ಸುಮಾರು 7 ರಿಂದ 8 ವರ್ಷಗಳ ಅವರು ಒಳ್ಳೆಯ ಸ್ನೇಹಿತರಾಗಿದ್ದರು. ಬಳಿಕ 2019ರಲ್ಲಿ ಮದುವೆಯಾಗಿ 5 ವರ್ಷಗಳ ದಾಂಪತ್ಯ ಜೀವನ ಕೊನೆಯಾಗಿಸಲು ಮುಂದಾಗಿದ್ದಾರೆ.
ಯುವರಾಜ್‌ಕುಮಾರ್ ಜೊತೆಗೆ ದೊಡ್ಮನೆಯವರ ಪ್ರೀತಿ ವಿಶ್ವಾಸ ಗಳಿಸಿದ್ದ ಅವರು ಕಳೆದ ಆರು ತಿಂಗಳಿನಿಂದ ಅಮೆರಿಕಾದಲ್ಲಿದ್ದಾರೆ. ಇನ್ನು ಪತ್ನಿ ಶ್ರೀದೇವಿಗೆ ಡಿವೋರ್ಸ್ ನೀಡಲು ಜೂನ್ 6ರಂದು ಬೆಂಗಳೂರಿನ ಫ್ಯಾಮಿಲಿ ಕೋರ್ಟ್‌ಗೆ ಯುವ ರಾಜ್‌ಕುಮಾರ್ ಅರ್ಜಿ ಸಲ್ಲಿಸಿದ್ದಾರೆ. ಶ್ರೀದೇವಿಗೆ ಡಿವೋರ್ಸ್ ನೋಟಿಸ್ ಕೂಡ ಕಳುಹಿಸಲಾಗಿದೆ.
ಇತ್ತ ಸ್ಯಾಂಡಲ್‌ವುಡ್‌ನಲ್ಲಿ ಒಂದು ವಾರದ ಒಳಗೆ ಕೇಳಿಬರುತ್ತಿರುವ ಎರಡನೇ ವಿಚ್ಛೇದನ ಪ್ರಕರಣ ಇದಾಗಿದೆ. ಈ ಮೊದಲು ಸಿಂಗರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ನಡುವಿನ ವಿಚ್ಛೇದನ ಸುದ್ದಿ ಬಾರೀ ಸದ್ದು ಮಾಡಿತ್ತು. ಈಗ ಯುವ ರಾಜ್‌ಕುಮಾರ್ ವಿಚ್ಛೇದನ ಸುದ್ದಿ ಶಾಕ್ ನೀಡಿದೆ.



Click it and Unblock the Notifications