Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಶೋಭಾ ಮಾರಕ ಬೌಲಿಂಗ್‌ಗೆ ಯಡ್ಡಿ ಕ್ಲೀನ್ ಬೋಲ್ಡ್

ರಾಜಕೀಯದಲ್ಲಿ ಸಿಕ್ಸರ್, ಬೌಂಡರಿಗಳನ್ನು ಸಿಡಿಸಿದ ಅನುಭವ ಇರುವ ಯಡಿಯೂರಪ್ಪ ಆಟ ಇಲ್ಲಿ ನಡೆಯಲಿಲ್ಲ. ಶೋಭಾ ಬೌಲಿಂಗಿಗೆ ಕ್ಲೀನ್ ಬೌಲ್ಡ್ ಆದರು. ಯಡಿಯೂಪ್ಪ ಅವರ ಬ್ಯಾಟಿಂಗ್‌ಗಿಂತಲೂ ಶೋಭಾ ಅವರ ಮಾರಕ ಬೌಲಿಂಗ್ ಆಕರ್ಷಕವಾಗಿತ್ತು. ದೊಡ್ಡಕೆರೆ ಮೈದಾನದಲ್ಲಿ ರಾಜ್ಯ ಸಚಿವರ ಈ ಕ್ರಿಕೆಟ್ ಆಟ ಮೈಸೂರಿಗರಿಗೆ ರಸದೌತಣ ನೀಡಿತು.
ಮೈತ್ರಾದೇವಿ ಯಡಿಯೂರಪ್ಪ ಟ್ರಸ್ಟ್ ಆಯೋಜಿಸಿದ್ದ ದಿವಂಗತ ವರನಟ ಡಾ.ರಾಜ್ ಕುಮಾರ್ ಸವಿನೆನಪಿಗಾಗಿ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳವಾರ ಮೈಸೂರಿಗೆ ಆಗಮಿಸಿದ್ದರು. ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಪಂದ್ಯಾವಳಿ ನಡೆಯಲಿದೆ. ಈ ಸಂದರ್ಭದಲ್ಲಿ ಅವರು ಅರೆ ಕ್ಷಣ ರಾಜಕೀಯ ಮರೆತು ಬ್ಯಾಟು ಹಿಡಿದು ಮೈದಾನಕ್ಕೆ ಇಳಿದದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮದಾಸ್, ಅಬಕಾರಿ ಸಚಿವ ರೇಣುಕಾಚಾರ್ಯ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಮೂಡಾ ಅಧ್ಯಕ್ಷ ನಾಗೇಂದ್ರ, ಗೃಹ ಮಂಡಳಿ ಅಧ್ಯಕ್ಷ ಜಿ ಟಿ ದೇವೇಗೌಡ, ಮೇಯರ್ ಸಂದೇಶ್ ಸ್ವಾಮಿ ಸೇರಿದಂತೆ ಹಲವಾರು ಮುಖಂಡರು ಭಾಗಹಿಸಿದ್ದರು. ಅದೆಲ್ಲಾ ಸರಿ ಸಫಾರಿಯನ್ನು ಒಂಚೂರು ಒಳಗೆ ಸಿಗಿಸಿಕೊಂಡು, ಪ್ಯಾಡ್ ತೊಟ್ಟು ತಲೆಗೆ ಹೆಲ್ಮೆಟ್ ಹಾಕಿಕೊಂಡು ಬಂದಿದ್ದಿದ್ದರೆ ಥೇಟ್ ಆರಂಭಿಕ ಬ್ಯಾಟ್ಸ್‌ಮನ್‌ರಂತೆ ಕಂಗೊಳಿಸುತ್ತಿದ್ದರು ಎಂಬ ಮಾತುಗಳು ಕೇಳಿಬಂದಿವೆ.



Click it and Unblock the Notifications
