Latest Updates
-
ಮುಂಬೈನಲ್ಲಿ ಕಲುಷಿತ ಗಾಳಿ: ವಾಕಿಂಗ್ ಹೋಗುವ ಮುನ್ನ ಈ ಎಚ್ಚರಿಕೆ ವಹಿಸಿ, ಇಲ್ಲದಿದ್ದರೆ ಆರೋಗ್ಯಕ್ಕೆ ಕುತ್ತು! -
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ!
ಜನಾನುರಾಗಿ ಐಎಎಸ್ ಅಧಿಕಾರಿ ಮಣಿವಣ್ಣನ್ 2ನೇ ವಿವಾಹ

ಸುಮಾರು ಮೂರು ವರ್ಷಗಳ ಕಾಲ ಮಣಿವಣ್ಣನ್ ಮೈಸೂರಿನ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ಸಲ್ಮಾ ಆಗಷ್ಟೇ ಐಎಎಸ್ ಪ್ರೊಬೆಷನರಿಯಾಗಿ ಮೈಸೂರಿಗೆ ಬಂದಿಳಿದು ಮಣಿವಣ್ಣನ್ರ ಮಾರ್ಗದರ್ಶನದಲ್ಲಿ ಪ್ರೊಬೆಷನರಿ ಅವಧಿ ಪೂರ್ಣಗೊಳಿಸಿದ್ದರು. ಆಗ ಪರಿಚಯವಾದ ಸ್ನೇಹ ಈಗ ಇಬ್ಬರನ್ನು ದಾಂಪತ್ಯದ ಹೊಸ್ತಿಲಿಗೆ ತಂದು ನಿಲ್ಲಿಸಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿ ಅತ್ಯುತ್ತಮವಾಗಿ ಕೆಲಸ ಮಾಡುವ ಮೂಲಕ ಗಮನ ಸೆಳೆದಿದ್ದ ಮಣಿವಣ್ಣನ್ ಬಳಿಕ ರೇಷ್ಮೆ ಇಲಾಖೆ ಆಯುಕ್ತರಾಗಿ, ತದನಂತರ ಈಗ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.
ಈ ಮಧ್ಯೆ ತಮ್ಮ ಮೊದಲ ಪತ್ನಿ ಜತೆಗಿನ ದಾಂಪತ್ಯ ಜೀವನ ಅಷ್ಟೇನೂ ಸುಖಮಯವಾಗಿರಲಿಲ್ಲ. ಅದೇ ಕಾರಣಕ್ಕಾಗಿ ಪತ್ನಿಯಿಂದ ವಿಚ್ಛೇದನ ಪಡೆದುಕೊಳ್ಳಲು ಬಹಳ ಹಿಂದೆಯೇ ಉದ್ದೇಶಿಸಿದ್ದರು. ಇದಕ್ಕೂ ಮುನ್ನ ಸಲ್ಮಾರನ್ನು ವಿವಾಹವಾಗಲು ಕೂಡ ಮಣಿವಣ್ಣನ್ ನಿಶ್ಚಯಿಸಿದ್ದರು ಎನ್ನಲಾಗಿದೆ. ಈಗ ಅಂದುಕೊಂಡಂತೆ ಇಬ್ಬರೂ ದಿಲ್ಲಿಯಲ್ಲಿ ವಿವಾಹವಾಗಿರುವುದನ್ನು ಸ್ವತಃ ಮಣಿವಣ್ಣನ್ ಖಚಿತಪಡಿಸಿದ್ದಾರೆ.



Click it and Unblock the Notifications
